ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಖಾನಾಪುರ ಪಟ್ಟಣದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- 16 ಮಂದಿ ಬಂಧನ

ಖಾನಾಪುರ: ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಪ್ರಮುಖ ರಸ್ತೆಯಲ್ಲಿರುವ ಎಸ್‌ ಬಿಐ ಬ್ಯಾಂಕ್ ಮುಂದೆ ಇರುವ ಆಮಂತ್ರಣ ಲಾಡ್ಜ್ ಮೇಲೆ ಖಾನಾಪುರ ಪಿಐ ಮಂಜುನಾಥ ನಾಯಕ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆ ಮಾಡುತ್ತಿದ್ದ ಐದು ಮಂದಿ ಯುವತಿಯರು ಹಾಗೂ 11 ಮಂದಿ ಯುವಕರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪಟ್ಟಣದ ಲಾಡ್ಜ್ ಮೇಲೆ ದಾಳಿ ಮಾಡಿದ ಖಾನಾಪುರ ಪೊಲೀಸರು, ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಳಗಾವಿ ಮೂಲದ ಯುವತಿಯರನ್ನು ಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಪರಾದ ಪಿಎಸ್ಐ ಚನ್ನಕೇಶವ ಬಬಲಿ, ಮುಖ್ಯ ಪೇದೆ ಜಯರಾಮ ಹಮ್ಮಣ್ಣನ್ನವರ, ಬಾಳಪ್ಪ ಯಲಿಗಾರ್ ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದು, ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗೇಶ ನಾಯ್ಕರ, ಪಬ್ಲಿಕ್ ನೆಕ್ಸ್ಟ್ ಖಾನಾಪುರ

Edited By : Manjunath H D
PublicNext

PublicNext

16/10/2024 09:54 pm

Cinque Terre

10.72 K

Cinque Terre

1

ಸಂಬಂಧಿತ ಸುದ್ದಿ