ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಅಕ್ರಮ ಸಾರಾಯಿ ಮಾರಾಟ - ಓರ್ವನ ಬಂಧನ

ಅಥಣಿ: ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಸಾರಾಯಿ ಟೆಟ್ರಾ ಪ್ಯಾಕ್‌ಗಳನ್ನು ಮಾರಾಟ ಮಾಡಲು ಸಂಗ್ರಹಿಸಿಟ್ಟ ಅಡ್ಡೆ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ 156 ಸಾರಾಯಿ ಪ್ಯಾಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ರಡೇರಹಟ್ಟಿ ಗ್ರಾಮದ ರಮೇಶ ಬಾಳಪ್ಪ ನಾಯಿಕ (30) ಬಂಧಿತ ಆರೋಪಿ, ಇವರು ಗ್ರಾಮದ ಸರ್ಕಾರಿ ಪುನರ್ವಸತಿ ಕೇಂದ್ರದ ಬಳಿ ಅಕ್ರಮವಾಗಿ ಮಾರಾಟ ಮಾಡಲು ಮದ್ಯದ ಟೆಟ್ರಾ ಪ್ಯಾಕ್‌ಗಳನ್ನು ಸಂಗ್ರಹಿಸಿಟ್ಟಿದ್ದರು. ಇದರ ಮಾಹಿತಿ ಪಡೆದ ಅಥಣಿ ಪೊಲೀಸರು ದಾಳಿ ನಡೆಸಿ 6200 ರೂ. ಮೊತ್ತದ ವಿವಿಧ ಕಂಪನಿಯ ಟೆಟ್ರಾ ಪ್ಯಾಕ್‌ಗಳನ್ನು ವಶಪಡಿಸಿಕೊಂಡು ಆರೋಪಿ ರಮೇಶನನ್ನು ಬಂಧಿಸಲಾಗಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯಲ್ಲಿ ಅಥಣಿ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ, ತನಿಖಾ ಸಹಾಯಕ ಪಿ.ಸಿ. ಕಂಟಿಗೊಂಡ, ಭೀಮಸೇನ ಮನ್ನಾಪುರ, ಎಸ್.ಎಸ್. ಸನದಿ, ರಮೇಶ ಹಾದಿಮನಿ ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

16/10/2024 10:10 pm

Cinque Terre

920

Cinque Terre

0

ಸಂಬಂಧಿತ ಸುದ್ದಿ