ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಆಯುಷ್ಮಾನ್ ವಿಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಅನುದಾನ ಒದಗಿಸಿ' - ಜೆ.ಪಿ ನಡ್ಡಾಗೆ, ಸಚಿವ ಗುಂಡೂರಾವ್ ಮನವಿ

ಬೆಂಗಳೂರು : ಆಯುಷ್ಮಾನ್ ಭಾರತ್ ಜನಾರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಸಚಿವರು ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದರು.

ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಅನುದಾನ ಭರಿಸುತ್ತಿದ್ದು, ಕೇಂದ್ರ ಸರ್ಕಾರ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿಕೊಡಬೇಕು ಎಂದು ಕೇಂದ್ರ ಸಚಿವ ಜೆಪಿ ನಡ್ಡಾಗೆ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದ್ದಾರೆ.

ಭೇಟಿಯ ವೇಳೆ ರಾಜ್ಯ ಆರೋಗ್ಯ ಇಲಾಖೆಯು ಕೈಗೊಂಡಿರುವ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಹಠಾತ್ ಹೃದಯಾಘಾತ ತಡೆಯಲು ಹೃದಯ ಜ್ಯೋತಿ ಯೋಜನೆ, ಡಯಾಲಿಸಿಸ್ ಯಂತ್ರಗಳಲ್ಲಿ ಏಕ ಬಳಕೆಯ ಡಯಲೈಸರ್‌ಗಳ ಬಳಕೆ, ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್‌ಗಳು, 10 ಬೆಡ್‌ಗಳ ಟೆಲಿ-ಐಸಿಯು ಸ್ಥಾಪನೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ ಮತ್ತು ಮುಟ್ಟಿನ ಕಪ್‌ಗಳ ವಿತರಣೆ ಕುರಿತಾಗಿ ವಿವರಿಸಿದ್ದಾರೆ.

Edited By : Abhishek Kamoji
PublicNext

PublicNext

16/10/2024 10:10 pm

Cinque Terre

28.35 K

Cinque Terre

0

ಸಂಬಂಧಿತ ಸುದ್ದಿ