ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಮಳೆಯ ಬಗ್ಗೆ ಎಚ್ಚರ ವಹಿಸಲು ತಹಶೀಲ್ದಾರ ಸಲಹೆ

ನವಲಗುಂದ: ವಾಯುಭಾರ ಕುಸಿತದಿಂದ ತಾಲೂಕಿನ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಸೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಎರಡು ದಿನ ಗುಡುಗು- ಸಿಡಿಲಿನಿಂದ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಸಾರ್ವಜನಿಕರು ಮುಂಜಾಗ್ರತೆಯಿಂದ ಇರಬೇಕು ಎಂದು ತಹಶೀಲ್ದಾರ ಸುಧೀರ ಸಾಹುಕಾರ ತಿಳಿಸಿದ್ದಾರೆ.

ಪ್ರವಾಹ, ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರು ಜೀವಹಾನಿ ಆಗದಂತೆ ಕ್ರಮ ವಹಿಸಬೇಕು. ಗುಡುಗು- ಸಿಡಿಲಿನಿಂದಾಗುವ ಅನಾಹುತಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ನದಿ, ಹಳ್ಳ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತಿತರೆ ಚಟುವಟಿಕೆ ನಡೆಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಹಳ್ಳ, ಕೆರೆ ದಡ ಸೇರಿದಂತೆ ಅಪಾಯವಿರುವ ಸೇತುವೆಗಳಲ್ಲಿ ಫೋಟೊ, ಸೆಲ್ಪಿಗಳನ್ನು ತೆಗೆಯದಂತೆ ಸಾರ್ವಜನಿಕರಿಗೆ ಅಧಿಕಾರಿಗಳು ತಿಳಿ ಹೇಳಬೇಕು. ಪ್ರತಿ ಗ್ರಾಮದಲ್ಲಿ ಡಂಗುರ ಸಾರುವುದು, ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

17/10/2024 02:33 pm

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ