ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ

ಚಿತ್ರದುರ್ಗ: 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಬೆಂಗಳೂರು ವಿಭಾಗದಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಗಡ್ಡದಾರಹಟ್ಟಿಯ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಕಿಲಾರಿ ಜೋಗಯ್ಯ ಜಾನುವಾರುಗಳ ಸಂರಕ್ಷಣೆ ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ. ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಸಂರಕ್ಷಣೆ, ಜಾನುವಾರುಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಬುಡಕಟ್ಟು ಸಂಸ್ಕೃತಿಯ ಆಚರಣೆಯ ಮೂಲಕ ಜಾನುವಾರುಗಳ ಸಂತತಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮೀಣ ಸೊಗಡ ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ.

ಇವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರಿಗೆ ತಲಾ 20 ಗ್ರಾಮ ಬಂಗಾರದ ಪದಕ ಹಾಗೂ ಐದು ಲಕ್ಷ ರೂ. ನಗದು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

17/10/2024 03:20 pm

Cinque Terre

10.85 K

Cinque Terre

0

ಸಂಬಂಧಿತ ಸುದ್ದಿ