ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಕ್ರಮ ಚಿನ್ನಾಭರಣ ಸಾಗಾಟ ಪ್ರಕರಣ: ಸಿಸಿಬಿ ಪೊಲೀಸ್ ಕಾರ್ಯಾಚರಣೆ

ಪಬ್ಲಿಕ್ ನೆಕ್ಸ್ಟ್ ಫಾಲೋ ಅಫ್..

ಹುಬ್ಬಳ್ಳಿ: ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದವನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆಯಷ್ಟೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ಪ್ರಕರಣದ ಬಗ್ಗೆ ವರದಿಯನ್ನು ಪ್ರಸಾರ ಮಾಡಿತ್ತು.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌ ಖಾಸಗಿ ಬಸ್ ನಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ನಡೆದಿದ್ದ ದಾಳಿಯಲ್ಲಿ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಭಿಷೇಕ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.

1 ಕೆಜಿ 101 ಗ್ರಾಂ ಚಿನ್ನಾಭರಣ ಹಾಗೂ 1 ಕೆಜಿ 450 ಗ್ರಾಂ ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದ್ದು,ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿಕೆ ನೀಡಿದ್ದಾರೆ. ಮುಂಬೈ ನಿಂದ ಹುಬ್ಬಳ್ಳಿ ಗೆ ಸಾಗಾಟ ಮಾಡಲಾಗ್ತಿತ್ತು. ಚಿನ್ನ ಸಾಗಾಟದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದೇವು. ಸಿಸಿಬಿ ತಂಡ ಹಾಗೂ ಧಾರವಾಡ ವಿದ್ಯಾಗಿರಿ ಪೊಲೀಸರಿಂದ ಜಂಟಿ ದಾಳಿ

ದಾಳಿ ವೇಳೆ ಅಭಿಷೇಕ್ ಎಂಬಾತನನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಮಾಹಿತಿ ಬಹಿರಂಗವಾಗಿದೆ ಎಂದರು.

ಬಾಂಬೆಯಿಂದ ಹುಬ್ಬಳ್ಳಿಗೆ ಬಿಲ್ ಇಲ್ಲದೇ ಚಿನ್ನ ಸಾಗಾಟ ಮಾಡ್ತಿದ್ದ ಅಭಿಷೇಕ್ ಮಹಾವೀರ ಕೊರಿಯರ್ ನಲ್ಲಿ ಕೆಲಸ ಮಾಡುತ್ತಿದ್ದ. ಎಷ್ಟು ದಿನದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನೋ ಬಗ್ಗೆ ತನಿಖೆಯನ್ನು ನಡೆಸಿದ್ದೇವೆ

ಬೇರೆ ಪ್ರಕರಣದಲ್ಲಿ ಭಾಗಿಯಾಗಿರೋ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಬೇಕಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ಹೇಳಿಕೆ ನೀಡಿದ್ದು, ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/10/2024 03:20 pm

Cinque Terre

115.71 K

Cinque Terre

4

ಸಂಬಂಧಿತ ಸುದ್ದಿ