ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ - ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಶತಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ಗುರುತಿಸಲ್ಪಡುತ್ತಾರೆ ಹಾಗೂ ಆರಾಧಿಸಲ್ಪಡುತ್ತಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ. ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ತತ್ವದಿಂದ ದೈವತ್ವಕ್ಕೆ ಏರಿದ ತಮ್ಮ ಕೃತಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹನೀಯ ವಾಲ್ಮೀಕಿ ಅವರು ಆರಂಭದಲ್ಲಿ ಬೇಡರಾಗಿ ನಂತರ ಸಂತರಾಗಿ, ಅಹಿಂಸೆಯ ಪ್ರತಿಪಾದಕರಾಗಿ ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಮಹರ್ಷಿ ವಾಲ್ಮೀಕಿ ಎಂದವರು ಬಣ್ಣಿಸಿದ್ದಾರೆ.

ಪ್ರಪಂಚದ ವಿವಿಧ ಭಾಷೆಗಳಿಗೆ ಅನುವಾದಗೊಂಡು ಜಗತ್ತಿನ ಪ್ರತಿಸ್ಥಿತ ವಿಶ್ವವಿದ್ಯಾಲಯ ಗಳಲ್ಲಿ ತತ್ವಜ್ಞಾನಿ ವಾಲ್ಮೀಕಿ ಅವರ ಕೃತಿ ಯನ್ನು ಓದುವ ಮೂಲಕ ಅವರ ಆದರ್ಶಗಳನ್ನು ಅನುಸರಿಸುತ್ತಿರುವುದು, ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

Edited By : Vinayak Patil
Kshetra Samachara

Kshetra Samachara

17/10/2024 05:29 pm

Cinque Terre

5.26 K

Cinque Terre

0

ಸಂಬಂಧಿತ ಸುದ್ದಿ