ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ವಾಲ್ಮೀಕಿ ಜಯಂತಿ ಆಚರಣೆ - ಕಾರ್ಯಕ್ರಮದಲ್ಲಿ ಶಾಸಕಿ ರೂಪಕಲಾ‌ ಭಾವುಕ

ಕೋಲಾರ : ಕೆಜಿಎಫ್ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಆದಿಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿದರು. ಪುರಾಣಗಳು ಹಾಗೂ ಈ ಆಧುನಿಕ ಯುಗದಲ್ಲಿಯೂ ಹೆಣ್ಣು ಮಕ್ಕಳು ಶೋಷಣೆಗೆ ಒಳಗಾಗುತ್ತಿರುವುದು ನಿಜಕ್ಕೂ ದುರದೃಷ್ಟಕರ ಎಂದು ಶಾಸಕಿ ಕಣ್ಣೀರಿಟ್ಟರು.

ಈ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗೆ ಒಂದು ಸ್ಥಾನಮಾನವಿದೆ. ಆದರೆ ಹೆಣ್ಣನ್ನು ಕೀಳು ಭಾವನೆಯಿಂದ ನೋಡದೆ ಆಕೆಯನ್ನು ಗೌರವಿಸಬೇಕೆಂದರು. ವಾಲ್ಮೀಕಿಯವರು ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ ಮಾತ್ರವಲ್ಲದೇ ಬೇರೆ- ಬೇರೆ ದೇಶಗಳಲ್ಲಿ ಪ್ರಚಲಿತದಲ್ಲಿವೆ. ವಾಲ್ಮೀಕಿ ಅವರ ತತ್ವಗಳನ್ನು ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.

Edited By : Suman K
Kshetra Samachara

Kshetra Samachara

17/10/2024 05:47 pm

Cinque Terre

520

Cinque Terre

0

ಸಂಬಂಧಿತ ಸುದ್ದಿ