ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರ್ಯಾಂಡ್ ಬೆಂಗಳೂರು ಮಾಡ್ತೀವಿ ಎಂದು ಬೆಂಗಳೂರು ನಗರವನ್ನು ಮುಳುಗಿಸಿದ್ದಾರೆ ಎಂದು ಹೆಚ್‌ಡಿಕೆ ಕಿಡಿ

ಬೆಂಗಳೂರು: ಇಡೀ ಬೆಂಗಳೂರಿಗೆ ಬೆಂಗಳೂರು ನಗರವೇ ಪ್ರವಾಹದಲ್ಲಿ ಮುಳುಗಿತು. ಆದರೆ, ಮುಖ್ಯಮಂತ್ರಿಯಾಗಲಿ, ಯಾವೊಬ್ಬ ಸಚಿವರೂ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ ವಿಚಾರಿಸಲಿಲ್ಲ. ಸಿಎಂ ಮಳೆಯ ಬಗ್ಗೆ ಒಂದು ಹೇಳಿಕೆ‌ ಕೂಡ ಕೊಡಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ‌ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಬೆಂಗಳೂರಿನಲ್ಲಿ ನೀರು ತುಂಬಿದ್ದರೆ ಅರ್ಧ ಗಂಟೆಯಲ್ಲಿ ಖಾಲಿ ಮಾಡೋದು ನಮಗೆ ಗೊತ್ತಿದೆ ಅಂತ ಡಿಸಿಎಂ ಹೇಳುತ್ತಾರೆ. ಜನರಿಗೆ ಊಟ ಇಲ್ಲ, ಮಲಗಲು ಜಾಗ ಇಲ್ಲ, ಮನೆಗಳಲ್ಲಿ ನೀರು ತುಂಬಿದೆ. ಹೊಟೇಲ್‌ನಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಇದೆ‌‌. ಈ ಸಮಸ್ಯೆ ಹಲವಾರು ವರ್ಷಗಳಿಂದ ಇದೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದವರು ಬೆಂಗಳೂರು ನಗರವನ್ನು ಮಳೆಯಲ್ಲಿ ಮುಳುಗಿಸಿದ್ದಾರೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಬೆಂಗಳೂರಿನ ಹೆಸರು ಹಾಳು ಮಾಡುವ ಕೆಲಸ ವಿಪಕ್ಷಗಳು ಮಾಡುತ್ತಿವೆ ಎಂದು ಡಿಸಿಎಂ ಹೇಳಿದ್ದಾರೆ. ಅವರು ಬೆಂಗಳೂರು ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಆಯಿತು. ಆದರೆ, ಒಳಚರಂಡಿ ವ್ಯವಸ್ಥೆ ಯಾಕೆ ಸರಿ ಮಾಡಲಿಲ್ಲ, ರಸ್ತೆಗಳನ್ನು ನದಿಗಳಂತೆ ದೃಶ್ಯ ಮಾಧ್ಯಮಗಳಲ್ಲಿ ಕಾಣುತ್ತಿದ್ದವು. ಇದಕ್ಕೆ ಪ್ರಕೃತಿ ಹೊಣೆಯೇ? ಮಳೆ ಬರುತ್ತದೆ ಎನ್ನುವುದು ಗೊತ್ತಿರಲಿಲ್ಲವೇ? ಮಾಧ್ಯಮಗಳೇ ಎಲ್ಲವನ್ನೂ ತೋರಿಸುತ್ತಿವೆ, ನಾವು ಹೇಳುವುದು ಏನೂ ಉಳಿದಿಲ್ಲ ಎಂದು ಡಿಕೆಶಿಗೆ ಟಾಂಗ್ ನೀಡಿದರು.

Edited By : Nagaraj Tulugeri
PublicNext

PublicNext

17/10/2024 06:08 pm

Cinque Terre

18.65 K

Cinque Terre

3

ಸಂಬಂಧಿತ ಸುದ್ದಿ