ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಸರ್ಕಾರದಿಂದ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ 1700 ಕೋಟಿ ಅನುದಾನ

ನವಲಗುಂದ: ರಾಜ್ಯ ಸರ್ಕಾರಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ 1722 ಕೋಟಿ ಹಂಚಿಕೆ ಮಾಡಿ ಪ.ಪಂಗಡಗಳ ಜನಾಂಗಕ್ಕೆ ಶಕ್ತಿ ತುಂಬುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಶಾಸಕ ಎನ್.ಹೆಚ್. ಕೋನರಡ್ಡಿ ಹೇಳಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಅಗಲು ಮಾತ್ರ ಸಾಧ್ಯ. ಪರಿಶಿಷ್ಟ ಪಂಗಡಗಳ ಜನಾಂಗಕ್ಕೆ ಪ್ರತ್ಯೇಕ ಸಚಿವಾಲಯ ಪ್ರಾರಂಭಿಸಿ ನಗರ ಹಾಗೂ ಗ್ರಾಮಗಳ ಕಾಲೋನಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ವಾಲ್ಮೀಕಿ ಭವನಗಳಿಗೆ ಹೆಚ್ಚು ಅನುದಾನ ನೀಡಿ ನನ್ನ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಘೂ ಹುಬ್ಬಳ್ಳಿ ತಾಲ್ಲೂಕಿನ ವಿವಿಧ ಕಡೆ ಭವನಗಳನ್ನು ನಿರ್ಮಿಸಿ ಸಮಾಜಕ್ಕೆ ಗೌರವ ತರುವ ಕಾರ್ಯ ಮಾಡಿದ್ದೇನೆ ಎಂದರು.

ಮಹರ್ಷಿ ವಾಲ್ಮೀಕಿ ನಿಗಮದಿಂದ ಸ್ವಯಂ ಉದ್ಯೋಗ, ಗಂಗಾಕಲ್ಯಾಣ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಯುವಕರಿಗೆ UPSC ಹಾಗೂ KPSC ಸೇರಿದಂತೆ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಬಡ ಮಕ್ಕಳಿಗೆ ವಸತಿ, ಪ್ರೋತ್ಸಾಹಧನ, ಗುತ್ತಿಗೆದಾರರಿಗೆ ಮೀಸಲಾತಿ, ಉದ್ಯೋಗ ಮುಂತಾದ ಸೌಲಭ್ಯ ನೀಡುವ ಮೂಲಕ ಜನಸೇವಕರಾಗಿ ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಸುಧೀರ ಸಾವಕಾರ, ತಾ.ಪಂ ಇಓ ಭಾಗ್ಯಶ್ರೀ ಜಾಗೀರದಾರ, ಪಿಎಸ್ಐ ಜನಾರ್ಧನ ಭಟ್ರಳ್ಳಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲಲಿತಾ ಹಾವೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಾಡದ, ಪಂ.ರಾ.ಇ ಎಇಇ ಎಮ್.ಜಿ. ಶಿಂಧೆ, ತೋಟಗಾರಿಕಾ ಇಲಾಖೆ ಅಧಿಕಾರಿ ಸಂಜೀವಕುಮಾರ ಗುಡಿಮನಿ, ಅಬಕಾರಿ ನಿರೀಕ್ಷಕಿ ಗೀತಾ ತೆಗ್ಯಾಳ ಸೇರಿದಂತೆ ಅನೇಕರು ಇದ್ದರು.

Edited By : PublicNext Desk
Kshetra Samachara

Kshetra Samachara

17/10/2024 09:00 pm

Cinque Terre

4.51 K

Cinque Terre

0

ಸಂಬಂಧಿತ ಸುದ್ದಿ