ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಿಂದ ಅಹ್ಮದಾಬಾದ್, ಚೆನ್ನೈಗೆ ವಿಮಾನ - ಕೇಂದ್ರ ಸಚಿವರ ಸಮಾಲೋಚನೆ

ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹ್ಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಾಗರಿಕ ವಿಮಾನಯಾನ ಸಚಿವರ ಗಮನ ಸೆಳೆದಿದ್ದಾರೆ.

ನವದೆಹಲಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಇಂದು ಸಚಿವ ರಾಮಮೋಹನ ನಾಯ್ದು ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.

ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಜೋಶಿ ಮನವಿ ಮಾಡಿದರು.

ಚೆನ್ನೈ ವಿಮಾನ ಸ್ಥಗಿತ ಬೇಡ: ಇನ್ನು, ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರಲ್ಲಿ ಮನವಿ ಮಾಡಿದರು.

ಛೋಟಾ ಮುಂಬೈ ಎಂದೇ ಹೆಸರಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ. ಅಹ್ಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿ ಒಂದು ಪ್ರಮುಖ ವಾಣಿಜ್ಯ ಕೇಂದ್ರ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹ ಗುರುತಿಸಿಕೊಳ್ಳುತ್ತಿದೆ. ಅಂತೆಯೇ ರೈಲ್ವೆ ನಿಲ್ದಾಣದ ಜತೆ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ಮೆರುಗಿನಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಸಚಿವ ನಾಯ್ಡು ಅವರ ಗಮನ ಸೆಳೆದರು ಜೋಶಿ.

ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶಾಲವಾದ ಪ್ರದೇಶದಲ್ಲಿ ಹೊಸ ಟರ್ಮಿನಲ್ ಸಹ ನಿರ್ಮಾಣ ಕಾಣುತ್ತಿದೆ. ಪ್ರಯಾಣಿಕರಿಗೆ ಮತ್ತು ವಿಮಾನಗಳಿಗೆ ಅಗತ್ಯ ಮೂಲ ಸೌಲಭ್ಯ ಇಲ್ಲಿದ್ದು, ಚೆನ್ನೈ ಸಂಪರ್ಕದ ವಿಮಾನಯಾನ ಸ್ಥಗಿತಗೊಳಿಸಿದೆ ಮುಂದುವರೆಸಿ ಎಂದು ನಾಗರಿಕ ವಿಮಾನಯಾನ ಸಚಿವರೊಂದಿಗೆ ಪ್ರಲ್ಹಾದ ಜೋಶಿ ಸಮಾಲೋಚನೆ ನಡೆಸಿದರು.

Edited By : Nagaraj Tulugeri
PublicNext

PublicNext

17/10/2024 09:35 pm

Cinque Terre

21.84 K

Cinque Terre

0

ಸಂಬಂಧಿತ ಸುದ್ದಿ