ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಹಾರದಲ್ಲಿ ಮತ್ತೆ ಮರಣ ಮೃದಂಗ - ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆ!

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ನಕಲಿ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಒಂದು ದಿನದ ಮುನ್ನ ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.

ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ಜನರು ನಕಲಿ ಮದ್ಯ ಸೇವಿಸಿದ್ದರು ತೀವ್ರ ಅಸ್ವಸ್ಥಗೊಂಡಿದ್ದರು. ಕಳೆದ ಮೂರು ದಿನಗಳಲ್ಲಿ ಸಿವಾನ್‌ನ ಭಗವಾನ್‌ಪುರ, ಮಧಾರ್ ಮತ್ತು ಕೌಂಡಿಯಾದಲ್ಲಿ 20 ಜನರ ಸಾವನ್ನು ಸಿವಾನ್ ಪೊಲೀಸ್ ವರಿಷ್ಠಾಧಿಕಾರಿ ಅಮಿತೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಸಿವಾನ್‌ನಲ್ಲಿ, ಸರ್ಕಾರಿ ಸದರ್ ಆಸ್ಪತ್ರೆಯಲ್ಲಿ 20 ಮಂದಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಸೋಮವಾರ ಮತ್ತು ಮಂಗಳವಾರ 20 ಮಂದಿ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸಂತ್ರಸ್ತರ ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ.

ನೆರೆಯ ಸರನ್ ಜಿಲ್ಲೆಯಲ್ಲಿ, ಮಸಾರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಮದ್ಯ ಸೇವಿಸಿ ಆರು ಜನರು ಸಾವನ್ನಪ್ಪಿದ್ದರು. ಸರನ್ ಜಿಲ್ಲೆಯ ಇಬ್ರಾಹಿಂಪುರ ಗ್ರಾಮವೊಂದರಲ್ಲೇ ನಾಲ್ಕು ಸಾವುಗಳು ವರದಿಯಾಗಿವೆ. ಒಂಬತ್ತು ಅಕ್ರಮ ಮದ್ಯ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸರನ್ ಎಸ್ಪಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ಎರಡು ಗಡಿ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 49 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Edited By : Abhishek Kamoji
PublicNext

PublicNext

17/10/2024 09:46 pm

Cinque Terre

51.98 K

Cinque Terre

3

ಸಂಬಂಧಿತ ಸುದ್ದಿ