ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING ನಟಿ ಅಮೂಲ್ಯ ಸಹೋದರ, ಸ್ಯಾಂಡಲ್‌ವುಡ್‌ ನಿರ್ದೇಶಕ ದೀಪಕ್ ನಿಧನ

ಬೆಂಗಳೂರು : ಕನ್ನಡದ ಖ್ಯಾತ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್​ ಅರಸ್​ ಅವರು ಇಂದು ಕೊನೆಯುಸಿರು ಎಳೆದಿದ್ದಾರೆ.

ಕಿಡ್ನಿ ವೈಫಲ್ಯದಿಂದ ದೀಪಕ್ ಅರಸ್ ಅವರು ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ದೀಪಕ್ ಅರಸ್​ ಗುರುತಿಸಿಕೊಂಡಿದ್ದರು. ಇಂದು ಸಂಜೆ 7 ಗಂಟೆ ಸುಮಾರಿಗೆ ದೀಪಕ್ ಅರಸ್‌ ನಿಧನರಾಗಿದ್ದಾರೆ. ಅಮೂಲ್ಯ ಸಹೋದರ ದೀಪಕ್ ಅರಸ್ ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ನಿರ್ದೇಶಿಸಿದ್ದಾರೆ.

Edited By : Abhishek Kamoji
PublicNext

PublicNext

17/10/2024 09:58 pm

Cinque Terre

79.98 K

Cinque Terre

5

ಸಂಬಂಧಿತ ಸುದ್ದಿ