ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಹರ್ಷಿ ವಾಲ್ಮೀಕಿ ಅವರ ಜೀವನವೇ ಒಂದು ಪಾಠ- ಜಿಲ್ಲಾಧಿಕಾರಿ

ಧಾರವಾಡ: ಋಷಿ ಮಹರ್ಷಿ, ಮಹಾನ್ ತಪಸ್ವಿ ಮಹರ್ಷಿ ವಾಲ್ಮೀಕಿ ಅವರ ಜೀವನವೇ ಒಂದು ಪಾಠ. ಅವರು ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಪ್ರತಿಯೊಬ್ಬರು ಜೀವನದಲ್ಲಿ ಎದುರಿಸುವ ಪ್ರಸಂಗಗಳನ್ನು ಪಾತ್ರಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ನಿತ್ಯವೂ ಸತ್ಯವಾಗಿರುವ ಜೀವನ ಮೌಲ್ಯಗಳ ಸಂದೇಶಗಳನ್ನು ಮಹಾಕಾವ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಪ್ಪು ಮಾಡುವುದು ಸಹಜ. ಆದರೆ, ಅದರ ಅರಿವು ಮೂಡಿದಾಗ ತಿದ್ದುಕೊಂಡು ಮತ್ತೆ ತಪ್ಪದಂತೆ ಜೀವನದಲ್ಲಿ ಮುನ್ನಡೆಯಬೇಕು. ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ನಾವು ಅವಲೋಕಿಸಿದಾಗ ಇದೇ ಸತ್ಯ ತಿಳಿದು ಬರುತ್ತದೆ. ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ, ಒಂದು ಮಹಾಕಾವ್ಯವನ್ನು ಬರೆದು, ಮನುಕುಲಕ್ಕೆ ಮಾರ್ಗದರ್ಶಕನಾದ ಮತ್ತು ಋಷಿ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಮನೋಹರ ಗುಡಸಲಮನಿ, ಚಂದ್ರಶೇಖರ ಜುಟ್ಟಲ, ಸುರೇಶ ಗುಂಡನವರ ಅವರು ಮಾತನಾಡಿದರು.

Edited By : PublicNext Desk
Kshetra Samachara

Kshetra Samachara

17/10/2024 10:34 pm

Cinque Terre

6.18 K

Cinque Terre

0

ಸಂಬಂಧಿತ ಸುದ್ದಿ