ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಲೇಜು ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

ಚಿತ್ರದುರ್ಗ : ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಪ್ರಥಮ ಬಿಎಸ್‌ಸಿ ವಿದ್ಯಾರ್ಥಿನಿ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರೇಮಾ ಸಾವನ್ನಪ್ಪಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಪ್ರಥಮ ಬಿಸ್ಸಿ ಓದುತ್ತಿದ್ದ ಪ್ರೇಮಾ, ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ PSI ರಘು ಬೇಟಿ ಪರಿಶೀಲನೆ.

Edited By : Somashekar
PublicNext

PublicNext

18/10/2024 12:23 pm

Cinque Terre

14.79 K

Cinque Terre

0

ಸಂಬಂಧಿತ ಸುದ್ದಿ