ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್ – ಹೈಕೋರ್ಟ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ರಿಲೀಫ್‌ ಸಿಕ್ಕಿದೆ. ಭವಾನಿ ಅವರ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.

ಈಗಾಗಲೇ ಚಾರ್ಜ್‌ಶೀಟ್ ಫೈಲ್ ಆಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣ್ತಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದಷ್ಟೆ ವಾದ ಎಂದು ತನಿಖೆಯ ಅಗತ್ಯತೆಯನ್ನು ಎಸ್‌ಐಟಿ ಪರ ವಕೀಲರು ಒತ್ತಿ ಹೇಳಿದರು. ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ ಎಂದು ಜಾಮೀನು ರದ್ದು ಮಾಡಲು ಕೋರ್ಟ್‌ ನಿರಾಕರಿದೆ.

Edited By : Nirmala Aralikatti
PublicNext

PublicNext

18/10/2024 12:36 pm

Cinque Terre

38.51 K

Cinque Terre

3