ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ - ವಿಪಕ್ಷ ಉಪನಾಯಕ ಬೆಲ್ಲದ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪ್ರಕರಣ ವಿಚಾರವಾಗಿ, ಗಲಭೆಯಲ್ಲಿ ಭಾಗಿಯಾದವರಿಗೆ ಧರ್ಮದ ಅಂಧತ್ವವಿದೆ. ಆದ್ರೆ ಕಾಂಗ್ರೆಸ್ ನವರಿಗೆ ಮತಬ್ಯಾಂಕ್ ಅಂಧತ್ವವಿದೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಈ ರೀತಿ ವಿಷಯಾಂತರ ಮಾಡಿಸುತ್ತಿದ್ದಾರೆ. ಇ.ಡಿ ಈಗಾಗಲೇ ತನಿಖೆ ಮಾಡುತ್ತಿದೆ. ಹಳೇ ಹುಬ್ಬಳ್ಳಿ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇದೇ ತಿಂಗಳು 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣ‌ ವಾಪಸ್ ಪಡೆದ ಸರಕಾರದ ಕ್ರಮ ಖಂಡಿಸಿ, ಇದೇ 25ರಂದು ರಾಜ್ಯದ ಪ್ರಮುಖರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಅಂದಾಜು 25 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಇನ್ನು ಮುಡಾ ಹಗರಣ ವಿಚಾರ, ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ. ಈ ವಿಚಾರವಾಗಿ ನಾವು ಹೋರಾಟ ಕೈಬಿಟ್ಟಿಲ್ಲ. ಈ ಬಗ್ಗೆ ಬೇರೆ ಬೇರೆ ಆಯಾಮದಲ್ಲಿ‌ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ. ಇ.ಡಿಯಿಂದ ಬಂಧನ ಮಾಡೋದೇ ಆದ್ರೆ ಸಿಎಂ‌ ರಾಜೀನಾಮೆ ನೀಡಲೇಬೇಕೆಂದು ಒತ್ತಾಯಿಸಿದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/10/2024 01:50 pm

Cinque Terre

14.82 K

Cinque Terre

3

ಸಂಬಂಧಿತ ಸುದ್ದಿ