ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಗಾಂಜಾ ಮಾರಾಟಕ್ಕೆ ಯತ್ನ - ಆರೋಪಿಯ ಬಂಧನ

ಸುರತ್ಕಲ್: ಇಲ್ಲಿನ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಗುರುತಿಸಲಾಗಿದೆ. ಆರೋಪಿಯಿಂದ 30ಸಾವಿರ ರೂ. ಮೌಲ್ಯದ ಸುಮಾರು 1.5 ಕೆ.ಜಿ.ಯಷ್ಟು ಗಾಂಜಾ,15 ಸಾವಿರ ರೂ. ಬೆಲೆಬಾಳುವ ಒಂದು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯು ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಹೆಗಲಿನಲ್ಲಿ ಬ್ಯಾಗ್‌ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸ್ ವಾಹನ ಕಂಡು ಓಡಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದ್ದಾರೆ. ಆಗ ತನ್ನ ಬ್ಯಾಗ್‌ನಲ್ಲಿ ಗಾಂಜಾ ಇದ್ದು, ಅದಕ್ಕಾಗಿ ಪೊಲೀಸರನ್ನು ಕಂಡಾಗ ಓಡಿ ಪರಾರಾಯಾಗಲು ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ದ ಕಲಂ 8 20(d) (6), ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

18/10/2024 01:51 pm

Cinque Terre

342

Cinque Terre

0

ಸಂಬಂಧಿತ ಸುದ್ದಿ