ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಟೇರಿಂಗ್ ರಾಡ್ ಕಟ್ಟಾಗಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್

ರಾಮನಗರ : ರಾಮನಗರದಿಂದ ಮಾಗಡಿಗೆ ಬರುತ್ತಿದ್ದ ಸರ್ಕಾರಿ ಬಸ್‌ ಸ್ಟೇರಿಂಗ್ ರಾಡ್ ಕಟ್ಟಾಗಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆ ಘಟನೆ ನಡೆದಿದೆ. ಸುದೈವವಶಾತ್ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ತಾಲೂಕಿನ ಅತ್ತಿಂಗೆರೆ ಗೇಟ್ ಸಮೀಪದ ಮುಖ್ಯರಸ್ತೆ ಬಳಿ ಘಟನೆ ನಡೆದಿದ್ದು ರಾಮನಗರದಿಂದ ಮಾಗಡಿಗೆ ಬರುವ ವೇಳೆ ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ನಲ್ಲಿದ್ದ 19ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಒಬ್ಬ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿ ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/10/2024 02:40 pm

Cinque Terre

4.6 K

Cinque Terre

0

ಸಂಬಂಧಿತ ಸುದ್ದಿ