ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ

ಬೈಂದೂರು: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ವಿಭಾಗ) ಬೆಳಗಾವಿ,ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ‌ಪಂದ್ಯಾಟದಲ್ಲಿ,ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾರೆ.

ಬಾಲಕಿಯರ 70 ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ ಗಾಯತ್ರಿ ಚಿನ್ನದ ಪದಕ ಹಾಗೂ ಬಾಲಕರ 97+ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿ ಹ್ರತ್ವಿಕ್ ಚಿನ್ನದ ಪದಕ.ಈ ಮೂಲಕ ಈರ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಕ್ರಮವಾಗಿ, 50 ಕೆ.ಜಿ.ವಿಭಾಗದಲ್ಲಿ ಅನನ್ಯ ಬೆಳ್ಳಿಯ ಪದಕ,97ಕೆ.ಜಿ.ವಿಭಾಗದಲ್ಲಿ ಪನ್ನಗ ಬೆಳ್ಳಿಯ ಪದಕ 72ಕೆ.ಜಿ.ವಿಭಾಗದಲ್ಲಿ ಅನುಷಾ ಕಂಚಿನ ಪದಕ,68 ಕೆ.ಜಿ.ವಿಭಾಗದಲ್ಲಿ ಅನುಷಾ ಆರ್, ಕಂಚಿನ ಪದಕ,77 k.g ವಿಭಾಗ ಪ್ರಣಿತ್ ರೈ ಕಂಚಿನ ಪದಕ ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/10/2024 02:55 pm

Cinque Terre

650

Cinque Terre

0

ಸಂಬಂಧಿತ ಸುದ್ದಿ