ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು : ಸಮೃದ್ಧ ಜನಸೇವಾ ಟ್ರಸ್ಟ್ ಮೂಲಕ ಗ್ರಾಮೀಣ ಭಾಗಗಳಲ್ಲಿ ಆರೋಗ್ಯಕ್ಕೆ ಒತ್ತು - ಬಿ.ಎಸ್.ಸುರೇಶ್ ಶೆಟ್ಟಿ

ಕುಂದಾಪುರ : ಗ್ರಾಮೀಣ ಭಾಗಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ರಕ್ಷಣೆಗೆ ಸಮೃದ್ಧ ನ ಸೇವಾ ಚಾರಿಟೇಬಲ್ ಟ್ರಸ್ಟ್ ಸದಾ ಒತ್ತು ನೀಡುತ್ತದೆ. ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆಗಳ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆ ಮಾಡುವ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ ಎಂದು ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಇದರ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು.

ಅವರು ಗುರುವಾರ ಸಮೃದ್ಧ ಬೈಂದೂರು, ಪ್ರಸಾದ್ ನೇತ್ರಾಲಯ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಗಂಗನಾಡು ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗನಾಡು ಇಲ್ಲಿ ಹಮ್ಮಿಕೊಳ್ಳಲಾದ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸಾದ್ ನೇತ್ರಾಲಯದ ಪಿ.ಆರ್.ಒ. ಮೋಹನ್, ವೈದ್ಯೆ ಡಾ. ತನ್ವಿ ರೈ, ಗ್ರಾಮ ಪಂಚಾಯತ್ ಸದಸ್ಯ ವೀರೇಂದ್ರ ಶೆಟ್ಟಿ, ಸಿ,ಹೆಚ್.ಒ. ಡಾ. ತೀರ್ಥ ಕುಮಾರಿ, ಶಾಲೆಯ ಮುಖ್ಯೋಪಾದ್ಯಾಯ ಪ್ರಭಾಕರ ಬಿಲ್ಲವ, ಉಪಸ್ಥಿತರಿದ್ದರು. ಬಳಿಕ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Edited By : Somashekar
Kshetra Samachara

Kshetra Samachara

18/10/2024 03:11 pm

Cinque Terre

2.27 K

Cinque Terre

0

ಸಂಬಂಧಿತ ಸುದ್ದಿ