ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳ ದಾಳಿ.!

ಮೈಸೂರು : ಮೈಸೂರು ಮುಡಾದಲ್ಲಿ 50:50 ಅನುಪಾತದ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ‌ ಕಚೇರಿಗೆ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸುಮಾರು 8 ಅಧಿಕಾರಿಗಳ ತಂಡ ಮುಡಾ ಕಚೇರಿಗೆ ದಿಢೀರ್ ಭೇಟಿ ಕೊಟ್ಟು, ಮುಡಾ ಆಯುಕ್ತ ರಘುನಂದನ್ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಮುಡಾದಲ್ಲಿ 50:50ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವಾಗ ನಡೆದಿರುವ ಹಗರಣದ ಬಗ್ಗೆ ತೀವ್ರ ತನಿಖೆ ನಡೆಯುತ್ತಿದ್ದು ನೂರಾರು ಕೋಟಿ ಹಣಕಾಸಿನ ಅವ್ಯವಹಾರ ನಡೆದಿರುವ ಬಗ್ಗೆ ದೂರು ದಾಖಲಾಗಿತ್ತು. ಅಲ್ಲದೆ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಇಡಿಗೆ ದೂರು ಸಲ್ಲಿಸಿದ್ದ ಕಾರಣ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Edited By : Nagesh Gaonkar
PublicNext

PublicNext

18/10/2024 03:28 pm

Cinque Terre

20.47 K

Cinque Terre

3

ಸಂಬಂಧಿತ ಸುದ್ದಿ