ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ, ಸ್ಥಳದಲ್ಲೇ ದಂಪತಿ ಸಾವು

ಮೈಸೂರು: ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೊರವಲಯದ ಉತ್ತನಹಳ್ಳಿ ಸಮೀಪದ ರಿಂಗ್ ರಸ್ತೆಯಲ್ಲಿ ನಡೆದಿದೆ.

ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿವೆ. ನಂಜನಗೂಡು ತಾಲೂಕಿನ ಯಾಲಹಳ್ಳಿ ಗ್ರಾಮದ 53 ವರ್ಷದ ಪ್ರಸಾದ್, 45 ವರ್ಷದ ಕುಮಾರಿ ಮೃತ ದಂಪತಿ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಇಬ್ಬರ ಮೇಲೆ ಹರಿದ ಪರಿಣಾಮ ಇಬ್ಬರು ದಂಪತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕೆ.ಆರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Edited By : Manjunath H D
PublicNext

PublicNext

18/10/2024 03:55 pm

Cinque Terre

19.8 K

Cinque Terre

0