ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ - 'ಅನುದಾನ ಬಳಕೆಯಲ್ಲಿ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ'

ಕೋಲಾರ: 2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ 100 ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಿ ಎಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೋಲಾರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಏಕ್ ರೂಪ್ ಕೌರ್ ಹೇಳಿದರು. ‌

ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಲಾಖೆಗಳಿಗೆ ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಬೇಕು. ಮಾರ್ಚ್ ಅಂತ್ಯದವರೆಗೆ ಕಾಯದೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಡಿಸೆಂಬರ್ ಅಂತ್ಯ ಅಥವಾ ಜನವರಿ ಮಾಹೆಯೊಳಗೆ ಶೇಕಡ 100 % ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ , ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/10/2024 04:14 pm

Cinque Terre

240

Cinque Terre

0

ಸಂಬಂಧಿತ ಸುದ್ದಿ