ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಳೆಗೆ ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಧಾರವಾಡ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹುಬ್ಬಳ್ಳಿ-ಧಾರವಾಡ ಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ.

ಹುಬ್ಬಳ್ಳಿ - ಧಾರವಾಡ ಮಧ್ಯೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದರೆ, ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ.

ಮನಸೂರು - ಯರಿಕೊಪ್ಪ ಬಳಿಯ ಹಳ್ಳದಿಂದ ದೊಡ್ಡ ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ ನಿರ್ಮಾಣ ಹಂತದ ರಸ್ತೆ ಕೊಚ್ಚಿಕೊಂಡು ಹೋಗಿದೆ. ನೀರು ಹರಿದು ಹೋಗಲು ರಸ್ತೆಯ ಕೆಳ ಭಾಗದಲ್ಲಿ ದಾರಿ ಕಲ್ಪಿಸಲಾಗಿದೆ. ಆದರೆ, ಅದು ಅವೈಜ್ಞಾನಿಕವಾಗಿದೆ ಎಂದು ಕೆಲವರು ಆರೋಪಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ನೀರಿನ ರಭಸಕ್ಕೆ ರಸ್ತೆಯ ಒಂದು ಭಾಗ ಕಿತ್ತು ಹೋಗಿದೆ.

ಸದ್ಯಕ್ಕೆ ಇದು ಇನ್ನೂ ನಿರ್ಮಾಣ ಹಂತದಲ್ಲಿದ್ದು, ಮಳೆ ಕಡಿಮೆಯಾದ ನಂತರವೇ ಮತ್ತೆ ಪುನಃ ಕಾಮಗಾರಿ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/10/2024 04:41 pm

Cinque Terre

12.92 K

Cinque Terre

6

ಸಂಬಂಧಿತ ಸುದ್ದಿ