ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊರಬ: ಜಾನುವಾರು ಮೈ ತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಸೊರಬ: ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಭೈರೇಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ಮಿಥುನ್ ಗೌಡ (21) ಮೃತ ಯುವಕ. ಶುಕ್ರವಾರ ಬೆಳಗ್ಗೆ ಜಾನುವಾರುಗಳ ಮೈ ತೊಳೆಯಲು ಹೋದಾಗ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆ ಹಚ್ಚಿ ಮೇಲೆತ್ತಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

18/10/2024 04:55 pm

Cinque Terre

35.93 K

Cinque Terre

0

ಸಂಬಂಧಿತ ಸುದ್ದಿ