ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಐಟಿ, ಬಿಎಂಸಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್ ರವಾನಿಸಿದ್ದ ಡಾರ್ಜಲಿಂಗ್ ಮೂಲದ ಆರೋಪಿ ಅರೆಸ್ಟ್

ಬೆಂಗಳೂರು: ಕಾಲೇಜಿನ ಆವರಣದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಮೇಲ್ ರವಾನಿಸಿದ್ದ ಆರೋಪಿಯನ್ನು ವಿ.ವಿ.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ದೀಪಾಂಜನ್ ಮಿತ್ರಾ (48) ಬಂಧಿತ ಆರೋಪಿ. ಅಕ್ಟೋಬರ್ 4ರಂದು ವಿ.ವಿ.ಪುರಂ ಠಾಣಾ ವ್ಯಾಪ್ತಿಯಲ್ಲಿರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಹಾಗೂ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್ ಕಳಿಸಲಾಗಿತ್ತು.

ತಾಂತ್ರಿಕ ವಿಧಾನಗಳ ಮೂಲಕ ಮೇಲ್ ಕಳಿಸಲಾದ ಐಡಿಯ ಮೂಲ ಬೆನ್ನತ್ತಿದ ವಿ.ವಿ.ಪುರಂ ಠಾಣೆ ಪೊಲೀಸರು ಅಕ್ಟೋಬರ್ 17ರಂದು ಪಶ್ಚಿಮ ಬಂಗಾಳ ರಾಜ್ಯದ ಡಾರ್ಜಿಲಿಂಗ್ ಜಿಲ್ಲೆಯ ಸಾಲ್‌ಬರಿ ಟೌನ್‌ನಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ. ಬಿ.ಕಾಂ ವ್ಯಾಸಂಗ ಮಾಡಿರುವ ಆರೋಪಿಯ ವಿರುದ್ಧ ಪಶ್ಚಿಮ ಬಂಗಾಳದ ವಿವಿಧೆಡೆ ಇದೇ ಮಾದರಿಯ 10 ಪ್ರಕರಣಗಳು ದಾಖಲಾಗಿದ್ದು, ಬಂಧಿತನಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ.

ಬಂಧಿತನನ್ನ ಬೆಂಗಳೂರಿಗೆ ಬೆಂಗಳೂರಿಗೆ ಕರೆತರಲು ಸ್ಥಳೀಯ ನ್ಯಾಯಾಲಯದಿಂದ ಟ್ರಾನ್ಸಿಟ್ ವಾರೆಂಟ್ ಸಿಗದ ಕಾರಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಬಂದಿರುವ ಬಾಂಬ್ ಬೆದರಿಕೆ ಮೇಲ್‌ಗಳ ಹಿಂದೆ ಆರೋಪಿಯ ಕೈವಾಡವಿರುವುದರ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : Suman K
PublicNext

PublicNext

18/10/2024 05:18 pm

Cinque Terre

8.46 K

Cinque Terre

0

ಸಂಬಂಧಿತ ಸುದ್ದಿ