ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಚಿಕ್ಕಮಗಳೂರು: ಜಿಲ್ಲೆಯ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಇದೇ 21ರ ಸಂಜೆ 5 ರಿಂದ 6:30 ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರಕ್ಕೆ ಆಯ್ಕೆ ಮಾಡಲು 50 ಪ್ರಶ್ನೆಗಳನ್ನು ಒಳಗೊಂಡ 100 ಅಂಕಗಳಿಗೆ ಪೂರ್ವಭಾವಿ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನ ತಿಳಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಪೂರ್ವಭಾವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ 20 ವಿದ್ಯಾರ್ಥಿಗಳು ಹಾಗೂ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ 30 ವಿದ್ಯಾರ್ಥಿಗಳಿಗೆ ಬೆಂಗಳೂರಿನ ಇನ್ಸ್ಪೈಟ್ ಐಎಎಸ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ಪ್ರತಿ ವಿದ್ಯಾರ್ಥಿಗೆ ಒಂದು ಲಕ್ಷ ರೂ ವೆಚ್ಚದಲ್ಲಿ ಒಂದು ವರ್ಷದವರೆಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯ ಪ್ರತಿ ವಸತಿ ನಿಲಯದಿಂದ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಕಾರ್ಯಗಾರಕ್ಕೆ ಆಯ್ಕೆ ಮಾಡಲಾಗುವುದೆಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

18/10/2024 05:29 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ