ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ವೈರಲ್ ಆಗಿರುವ ಶಿವಲಿಂಗೇಗೌಡ ಆಡಿಯೋ ವಿರುದ್ಧ ತನಿಖೆಗೆ ಆಗ್ರಹ - ಎಸ್ಪಿ ಕಚೇರಿಗೆ ಜೆಡಿಎಸ್ ದೂರು

ಹಾಸನ: ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಕಚೇರಿಗೆ ಇಂದು ಮನವಿ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಎಸ್ ಲಿಂಗೇಶ್ ಮಾತನಾಡಿ, ಕಳೆದ ಲೋಕಸಭೆ ಚುನಾವಣೆ ವೇಳೆ ವಾಮ ಮಾರ್ಗದಿಂದ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆ ಗೆದ್ದಿರುವುದು ಇತ್ತೀಚೆಗೆ ವೈರಲ್ ಆಗಿರುವ ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರ ಆಡಿಯೋದಿಂದ ಬಹಿರಂಗವಾಗಿದೆ.

ಸಂಸದ ಶ್ರೇಯಸ್ ಪಟೇಲ್ ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಸಚಿವ ಬಿ.ಶಿವರಾಂ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ ಗೋಪಾಲಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಸೇರಿದಂತೆ ಹಲವರು ಕೋಟ್ಯಂತರ ರೂಪಾಯಿ ಹಣ ಹಂಚಿಕೆಯಲ್ಲಿ ಭಾಗಿಯಾಗಿರುವ ಬಗ್ಗೆ ವೈರಲ್ ಆಗಿರುವ ಆಡಿಯೋದಲ್ಲಿ ಉಲ್ಲೇಖ ವಾಗಿದೆ. ಚುನಾವಣಾ ಆಯೋಗ ಇ ಡಿ ಸೇರಿದಂತೆ ಇತರ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Edited By : Vinayak Patil
Kshetra Samachara

Kshetra Samachara

18/10/2024 05:36 pm

Cinque Terre

660

Cinque Terre

0