ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಎಐಸಿಸಿ ಕಾರ್ಯದರ್ಶಿ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಾಮಪತ್ರ ಸಲ್ಲಿಕೆ ಶುಕ್ರವಾರದಿಂದ ಆರಂಭವಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ AICC ಕಾರ್ಯದರ್ಶಿ ಮಯೂರ ಜಯಕುಮಾರ ಸಭೆ ನಡೆಸಿದರು.

ಶಿಗ್ಗಾಂವಿಯ ಗುಜರಾತ್ ಭವನದಲ್ಲಿ ನಡೆದ ಸಭೆಯಲ್ಲಿZP,TP ಗ್ರಾಮ ಪಂ. ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಟ್ಟಣ & ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು.

ಶಿಗ್ಗಾಂವ್ ಸವಣೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಟಿಕೆಟ್ ಗಾಗಿ ಲಾಭಿ ನಡೆಸುತ್ತಿರುವ ಬೆನ್ನಲ್ಲಿಯೇ AICC ಕಾರ್ಯದರ್ಶಿ‌ ಮಯೂರ ಜಯಕುಮಾರ್ ನಡೆಸುತ್ತಿರುವ ಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಸಭೆ ಎನ್ನಲಾಗಿದೆ.

Edited By : Nagesh Gaonkar
PublicNext

PublicNext

18/10/2024 06:54 pm

Cinque Terre

21.07 K

Cinque Terre

0

ಸಂಬಂಧಿತ ಸುದ್ದಿ