ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ಆಶಾಭಾವನೆ ಇದೆ - ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ನಿಶ್ಚಿತವಾಗಿ ಸಿಗುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರವಾಗಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಿಕ್ಕೇ ಸಿಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕೂಲಂಕಷವಾಗಿ ಚರ್ಚೆ ನಡೆಸಲಾಗಿದೆ. ನಮ್ಮ ನಾಯಕರು ನಮ್ಮ ಸಮುದಾಯದ ಬಗ್ಗೆ ಸಕಾರಾತ್ಮಕ ಭಾವನೆ ಹೊಂದಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವುದರಿಂದ ಬೇರೆ ಸಮುದಾಯಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ ಎಂಬುದರ ಬಗ್ಗೆ ಚರ್ಚೆ ಆಗಿದ್ದು, ಮೊದಲಿನಿಂದಲೂ ಮೀಸಲಾತಿ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಹೇಳಿದರು.

Edited By : Manjunath H D
PublicNext

PublicNext

18/10/2024 07:35 pm

Cinque Terre

45.28 K

Cinque Terre

2

ಸಂಬಂಧಿತ ಸುದ್ದಿ