ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಪಹಣಿಗೆ ಆಧಾರ್ ಜೋಡಣೆಯಿಂದ ಭೂ ಅಕ್ರಮಕ್ಕೆ ಕಡಿವಾಣ ಜಿಲ್ಲಾಧಿಕಾರಿ ಅಕ್ರಂ ಪಾಷ

ಕೆಜಿಎಫ್ : ಕೆಜಿಎಫ್ ಭೂ ಅಕ್ರಮಗಳಿಗೆ ಪೂರ್ಣ ಕಡಿವಾಣ ಹಾಕುವ ಉದ್ದೇಶದಿಂದ ಕಂದಾಯ ಇಲಾಖೆ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಭಿಯಾನ ಹಮ್ಮಿಕೊಂಡಿದ್ದು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು‌ ಜಿಲ್ಲಾಧಿಕಾರಿ ಅಕ್ರಂಪಾಷ್‌ ತಿಳಿಸಿದರು.

ಕೆಜಿಎಫ್ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿ ಆಧಾರ್ ಜೋಡಣೆ ಕಾರ್ಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು, ಜನಸ್ನೇಹಿಗಾಗಿ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು ಪಹಣಿಗೆ ಆಧಾರ್ ಜೋಡಣೆಯಿಂದ ಒಬ್ಬರ ಜಮೀನನ್ನು ಮತ್ತೊಬ್ಬರು ತಮ್ಮ ಹೆಸರಿಗೆ ಅಕ್ರಮವಾಗಿ ನೋಂದಣಿ ಮಾಡಿಕೊಳ್ಳುವುದು ಸೇರಿ ಇನ್ನಿತರ ಅಕ್ರಮಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಈ ಹಿಂದೆ ಆಸ್ತಿ ನೋಂದಣಿ ಅವಧಿ ಕಡಿತಗೊಳಿಸಿ ಸಾರ್ವಜನಿಕರಿಗೆ ಶೀಘ್ರವಾಗಿ ಸೇವೆ ನೀಡುವ ಉದ್ದೇಶದಿಂದ ನೊಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ ತಂತ್ರಾಂಶ ಜಾರಿಗೆ ತರಲಾಗಿತ್ತು. ಇದೀಗ ಕಂದಾಯ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿಸುವ ಲುವಾಗಿ ಆರ್‌ಟಿಸಿಗೆ ಆಧಾರ್ ಜೋಡಣೆ ಹಾಗೂ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

Edited By : Nagaraj Tulugeri
Kshetra Samachara

Kshetra Samachara

18/10/2024 09:03 pm

Cinque Terre

1.22 K

Cinque Terre

0

ಸಂಬಂಧಿತ ಸುದ್ದಿ