ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ - 5 ಸ್ಥಳಗಳನ್ನು ಗುರುತಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು 5 ಸ್ಥಳಗಳನ್ನು ಗುರುತಿಸಿದೆ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಯಾವ ಸ್ಥಳವೆಂದು ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಎಂಬಿ ಪಾಟೀಲ್, ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ನಿಗದಿ ಮಾಡಲಾಗುವುದು ಎಂದಿದ್ದಾರೆ.

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.

Edited By : Vijay Kumar
PublicNext

PublicNext

18/10/2024 10:48 pm

Cinque Terre

5.22 K

Cinque Terre

0

ಸಂಬಂಧಿತ ಸುದ್ದಿ