ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಸಭೆ ವಿಫಲ - ಜಯಮೃತ್ಯುಂಜಯ ಸ್ವಾಮೀಜಿಯಿಂದ ಟ್ರ್ಯಾಕ್ಟರ್ ರ‍್ಯಾಲಿ ಕರೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಪಂಚಮಸಾಲಿ 2 ಎ ಮೀಸಲಾತಿ ಸಂಬಂಧ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದ ಜೊತೆ ಮಹತ್ವದ ಸಭೆ ನಡೆಸಲಾಯಿತು. ಆದರೆ ಮೀಸಲಾತಿ ಸಂಬಂಧ ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ. ಈಗ ನೀತಿ ಸಂಹಿತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರಿಂದ ಅಸಮಾಧಾನಗೊಂಡಿರುವ ಜಯಮೃತ್ಯುಂಜಯ ಸ್ವಾಮೀಜಿ ಮತ್ತೆ ಹೋರಾಟಕ್ಕೆ ಕರೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸಭೆ ಬಳಿಕ ಸಮುದಾಯದ ಮುಖಂಡರ ಜೊತೆ ಚರ್ಚೆ ನಡೆಸಿ ಮತ್ತೆ ಹೋರಾಟದ ಹಾದಿಗೆ ಕರೆ ನೀಡಿದ್ದಾರೆ. ಡಿಸೆಂಬರ್ 9 ರಂದು ಟ್ರ್ಯಾಕ್ಟರ್ ರ‍್ಯಾಲಿ ಮಾಡಲು ನಿರ್ಧರಿಸಿದ್ದಾರೆ. 5 ಸಾವಿರ ಟ್ರ್ಯಾಕ್ಟರ್ ರ‍್ಯಾಲಿ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟಕ್ಕೆ ಸ್ವಾಮೀಜಿ ಕರೆ‌ ನೀಡಿದ್ದಾರೆ.

ನಮ್ಮ ಬೇಡಿಕೆಯಂತೆ 2A ಮೀಸಲಾತಿ ಒದಗಿಸಿ. ಇಲ್ಲ ಹಳೆಯ ಸರ್ಕಾರದ ಶಿಫಾರಸಿನಂತೆ 2d, c ಗೆ ನಮ್ಮನ್ನ ಸೇರಿಸಿ, ಇಲ್ಲ ಕೇಂದ್ರ ಸರ್ಕಾರಕ್ಕೆ ಒಬಿಸಿಗೆ ಸೇರಿಸಲು ಶಿಫಾರಸು ಮಾಡಲಿ. ಇಲ್ಲದಿದ್ದರೆ ಡಿಸೆಂಬರ್ 9ರಂದು ನಮ್ಮ‌ ಹೋರಾಟ ನಿಶ್ಚಿತ ಎಂದು ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

Edited By : Vijay Kumar
PublicNext

PublicNext

18/10/2024 10:54 pm

Cinque Terre

12.25 K

Cinque Terre

0