ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ವಿಷಯವಾರು ಶಿಕ್ಷಕರಿಗೆ ಅವಕಾಶ ಕೊಡಲು ಮನವಿ

ಧಾರವಾಡ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಏಕರೂಪವಾಗಿರುವುದಿಲ್ಲ, ಪ್ರತಿ ವಿದ್ಯಾರ್ಥಿಗೂ ಭಿನ್ನವಾಗಿರುತ್ತದೆ. ಕಲಿಕಾ ಸಾಮರ್ಥ್ಯ ಹೆಚ್ಚು ಇರುವ ವಿದ್ಯಾರ್ಥಿಗಳು, ಸಾಧಾರಣ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಹಾಗೂ ಕನಿಷ್ಠ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಇರುತ್ತಾರೆ. ಎಸ್ಸೆಸ್ಸೆಲ್ಸಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವಾಗ ವಿಭಿನ್ನ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಕಲಿಕಾ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಅನಕೂಲವಾಗುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಬೇಕು ಇದರ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬೋಧನಾ ವ್ಯವಸ್ಥೆಯನ್ನು ಸಹ ಪರಿಗಣಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಸುವಾಗ ಭೌಗೋಳಿಕವಾಗಿ ಶಿಕ್ಷಕರುಗಳಿಗೆ ಅವಕಾಶ ಕಲ್ಪಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಶಿಕ್ಷಕರುಗಳ ನಿರ್ಣಯ ಅಂತಿಮವಾಗಿರಬೇಕು ರೂಪನಾತ್ಮಕ ಮೌಲ್ಯ ಮಾಪನದ ಆಂತರಿಕ ಅಂಕಗಳನ್ನು ಉತ್ತೀರ್ಣತೆಗೆ ಪರಿಗಣಿಸಬೇಕು. ಈ ಕುರಿತು ಮಾನ್ಯ ನಿರ್ದೇಶಕರು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಆದೇಶ ನೀಡಬೇಕು ಎಂದು ಗುರಿಕಾರ ವಿನಂತಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

18/10/2024 10:57 pm

Cinque Terre

4.61 K

Cinque Terre

0