ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹೆಣ್ಣು ಮಗುವಿನ ಮೇಲೆ ತಾತ್ಸಾರ, ತಿರಸ್ಕಾರದ ಭಾವನೆ ಬೇಡ - ನ್ಯಾಯಾಧೀಶ ದೊಡ್ಡಮನಿ

ಧಾರವಾಡ: ಸಮಾಜದಲ್ಲಿ ಮೂಢನಂಬಿಕೆ ಮತ್ತು ಮೌಢ್ಯತೆಯ ತಪ್ಪು ಕಲ್ಪನೆಗಳಿಂದ ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ತಾಳುವುದು ಬೇಡ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ 1994ರ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹೆಣ್ಣು ಮಗುವಿನ ಹತ್ಯೆ ಪ್ರಕರಣಗಳು ಅತೀ ಹೆಚ್ಚು ಬೆಳಕಿಗೆ ಬರುತ್ತಿದ್ದು, ಇಂತಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ಹೇಳಿದರು.

ಬಸವಣ್ಣ, ಅಕ್ಕಮಹಾದೇವಿ, ಸಾವಿತ್ರಿಬಾಯಿ ಪುಲೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅನೇಕ ಮಹಾನ ವ್ಯಕ್ತಿಗಳು ಮಹಿಳೆಯರ ಶಿಕ್ಷಣ ಹಕ್ಕು, ಸಮಾನತೆ ಹಾಗೂ ಮಹಿಳೆಯರಿಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರಕಿಸುವಲ್ಲಿ ಹೆಚ್ಚು ಆದ್ಯತೆ ನೀಡಿದ್ದರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ ಮಾತನಾಡಿ, ಶಿಕ್ಷಣದಿಂದ ಬದಲಾವಣೆ ಕಾಣಬಹುದು. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಮ್ಮ ಮನೆಯಿಂದಲೇ ಪ್ರಾರಂಭಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಲು ಸಮಾಜದಲ್ಲಿ ಉತ್ತಮ ಸಂದೇಶವನ್ನು ಬಿತ್ತರಿಸುವ ಕೆಲಸವಾಗಬೇಕು ಎಂದು ಹೇಳಿದರು.

Edited By : Vijay Kumar
Kshetra Samachara

Kshetra Samachara

19/10/2024 01:11 pm

Cinque Terre

15.63 K

Cinque Terre

0

ಸಂಬಂಧಿತ ಸುದ್ದಿ