ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ನಾಗರಿಕರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಿ ಇಲ್ಲವೇ ಹಸಿರು ಪಟಾಕಿಗಳನ್ನು ಬಳಸಿ - ಈಶ್ವರ್ ಖಂಡ್ರೆ

ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಿ ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಟಿಸಿರುವ ಈಶ್ವರ್ ಖಂಡ್ರೆ, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

19/10/2024 04:56 pm

Cinque Terre

43.17 K

Cinque Terre

3

ಸಂಬಂಧಿತ ಸುದ್ದಿ