ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಲೂರು: ಅಕ್ರಮ ಖಾತೆಗಳನ್ನು ವಜಾಗೊಳಿಸಿ ಶಾಸಕ‌ ಕೆ.ವೈ ನಂಜೇಗೌಡ

ಮಾಲೂರು : ಸುಮಾರು ವರ್ಷಗಳಿಂದ ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖಾತೆಗಳನ್ನು ಮಾಡಿಕೊಂಡು ಸ್ವಾಧೀನ ಪಡಿಸಿಕೊಂಡಿರುವ ಪುರಸಭೆ ಆಸ್ತಿಗಳ ಖಾತೆಗಳನ್ನು ವಜಾ ಮಾಡಿ ಪುರಸಭೆಗೆ ವಶಪಡಿಸಿಕೊಳ್ಳುವ ಬಗ್ಗೆ ಇಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಸರ್ವಾನುಮತದಿಂದ ತಿರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಕೆವೈ ನಂಜೇಗೌಡ ಅವರು ತಿಳಿಸಿದರು. ಪಟ್ಟಣದ ಪುರಸಭೆ ಕಛೇರಿಯ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷರಾದ ಕೋಮಲ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 260 ಕೋಟಿ ಬೆಲೆಯುಳ್ಳ 326 ಪುರಸಭೆ ಆಸ್ತಿಗಳನ್ನು ಗುರ್ತಿಸಿ ಮಾಹಿತಿ ನೀಡಿದ್ದು ಈ ಬಗ್ಗೆ ಇಂದು ನಡೆದ ವಿಶೇಷ ಸಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದಾಗ ಯಾವುದೇ ಪಕ್ಷದವರಾಗಿರಲಿ, ಎಷ್ಟೇ ಪ್ರಭಾವಿಗಳು ಸ್ವಾಧೀನದಲ್ಲಿ ರಲಿ ಅವರ ಅಕ್ರಮ ಖಾತೆಗಳನ್ನು ವಜಾ ಮಾಡಿ ಪುರಸಭೆಗೆ ವಶಪಡಿಸಿಕೊಳ್ಳಬೇಕು ಎಂದು ಸರ್ವಸದಸ್ಯರು ಪಕ್ಷಾತೀತವಾಗಿ ಸರ್ವಾನುಮತದಿಂದ ತಿರ್ಮಾನಿಸಿದ್ದು ಇಂದೇ ಅಕ್ರಮ ಖಾತೆಗಳನ್ನು ವಜಾ ಮಾಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳು ತಿಳಿಸಲಾಗುವುದು ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

19/10/2024 07:09 pm

Cinque Terre

700

Cinque Terre

0

ಸಂಬಂಧಿತ ಸುದ್ದಿ