ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪಹರಣ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ವಿಕಾಸ್‌ ಯಾದವ್‌

ನವದೆಹಲಿ: ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನು ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ ವಿಕಾಸ್‌ ಯಾದವ್‌ ಅವರನ್ನು ಸುಲಿಗೆ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಕಳೆದ ಡಿಸೆಂಬರ್‌ನಲ್ಲಿ ಬಂಧಿಸಿದ್ದರು ಎಂದು ಮೂಲಗಳು ಹೇಳಿವೆ.

ದೆಹಲಿಯ ರೋಹಿಣಿ ಪ್ರದೇಶದ ಉದ್ಯಮಿಯೊಬ್ಬರನ್ನು ಅಪಹರಿಸಿ, ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪವನ್ನು ಯಾದವ್‌ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 39 ವರ್ಷದ ಯಾದವ್‌ ಅವರನ್ನು ಡಿಸೆಂಬರ್ 18ರಂದು ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಏಪ್ರಿಲ್‌ 22ರಂದು ಜಾಮೀನು ನೀಡಿದೆ.

'ವಿಕಾಸ್‌ ಯಾದವ್ ಅವರು ಭಾರತದ ಗುಪ್ತಚರ ಸಂಸ್ಥೆ 'ರಿಸರ್ಚ್‌ ಆಯಂಡ್‌ ಅನಲಿಸಿಸ್‌ ವಿಂಗ್'ನ (ರಾ) ಕಚೇರಿ ಒಳಗೊಂಡಿರುವ ಕ್ಯಾಬಿನೆಟ್‌ ಸೆಕ್ರೆಟರಿಯೇಟ್‌ನಲ್ಲಿ ಕೆಲಸ ಮಾಡುತ್ತಿದ್ದರು' ಎಂದು ಯಾದವ್‌ ವಿರುದ್ಧ ನ್ಯೂಯಾರ್ಕ್‌ನ ನ್ಯಾಯಾಲಯಕ್ಕೆ ಅಲ್ಲಿನ ಪ್ರಾಸಿಕ್ಯೂಟರ್‌ಗಳು ಗುರುವಾರ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

19/10/2024 10:31 pm

Cinque Terre

67.18 K

Cinque Terre

0

ಸಂಬಂಧಿತ ಸುದ್ದಿ