ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ - 8 ಮಕ್ಕಳು ಸೇರಿ 12 ಮಂದಿ ದಾರುಣ ಸಾವು.!

ಜೈಪುರ: ಸ್ಲೀಪರ್ ಕೋಚ್ ಬಸ್ ಹಾಗೂ ಆಟೋ-ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ 8 ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ ಭೀಕರ ಅಪಘಾತವು ರಾಜಸ್ಥಾನದ ಸುನಿಪುರ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 11ಬಿಯಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆಯಲು ಪೊಲೀಸರಿಗೆ ಸಹಾಯ ಮಾಡಿದ್ದಾರೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಬಸ್ ಚಾಲಕ ಮತ್ತು ಕಂಡಕ್ಟರ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತದೇಹಗಳನ್ನು ಸರ್ಕಾರಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

Edited By : Vijay Kumar
PublicNext

PublicNext

20/10/2024 09:28 am

Cinque Terre

80.27 K

Cinque Terre

0

ಸಂಬಂಧಿತ ಸುದ್ದಿ