ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ವಿಮಾನ ನಿಲ್ದಾಣ ಸ್ಪೋಟಿಸುವದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಅಪರಿಚಿತರು ಇಮೇಲ್ ಮೂಲಕ ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.‌ ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ಶ್ವಾನದಳ, ಬಾಂಬ್ ಸ್ಕಾಡ್‌ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.‌ ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಪ್ರಕರಣ ದಾಖಲಿಸಿದ್ದಾರೆ.

Edited By : Nagesh Gaonkar
PublicNext

PublicNext

20/10/2024 03:58 pm

Cinque Terre

34.86 K

Cinque Terre

0

ಸಂಬಂಧಿತ ಸುದ್ದಿ