ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ : ಕಿಚ್ಚ ಅಭಿಮಾನಿಗಳಿಂದ ಸಂತಾಪ

ಮಲೂರು‌: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ದೈವಾಧೀನರಾದ ಹಿನ್ನೆಲೆ ಮಾಲೂರು ಪಟ್ಟಣದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದಿಂದ ಶ್ರದ್ಧಾಂಜಲಿ ಅರ್ಪಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್,ನಟ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಸುದೀಪ್ ಅವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/10/2024 09:24 pm

Cinque Terre

200

Cinque Terre

0