ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮ್ಮನನ್ನು ಕಳೆದುಕೊಂಡ ಕಿಚ್ಚನಿಗೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪವನ್​ ಕಲ್ಯಾಣ್​​

ಸ್ಯಾಂಡಲ್​ವುಡ್​ ಖ್ಯಾತ​ ನಟ ಕಿಚ್ಚ ಸುದೀಪ್​ ತಾಯಿ ನಿಧನರಾಗಿದ್ದಾರೆ. ಸುದೀಪ್ಅವರಿಗೆ ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್​ ಕಲ್ಯಾಣ್​ ಅವರು ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯನ್ನು ಕಳೆದುಕೊಂಡ ಸುದೀಪ್ ಅವರು ಬೇಗ ಚೇತರಿಸಿಕೊಳ್ಳಬೇಕು. ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಅಂತ ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

20/10/2024 09:57 pm

Cinque Terre

73.03 K

Cinque Terre

1

ಸಂಬಂಧಿತ ಸುದ್ದಿ