ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು-ಬೆಂಗಳೂರು-ಹುಬ್ಬಳ್ಳಿ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಾಟ

ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು -ಹುಬ್ಬಳ್ಳಿ ಮಧ್ಯೆ ನವೆಂಬರ್ 2 ಮತ್ತು 3 ರಂದು ವಿಶೇಷ ರೈಲು ಸಂಚರಿಸಲಿದೆ. ಸಂಸದ ಕ್ಯಾ.ಬ್ರಿಜೇಶ್ ಚೌಟರ ಮನವಿಗೆ ಸ್ಪಂದಿಸಿರುವ ರೈಲ್ವೆ ಸಚಿವಾಲಯ ಈ ವಿಶೇಷ ರೈಲು ಓಡಾಟಕ್ಕೆ ವ್ಯವಸ್ಥೆ ಕಲ್ಪಿಸಿದೆ ಎಂದು ಸಂಸದರ ಪ್ರಕಟನೆ ತಿಳಿಸಿದೆ.

ಹುಬ್ಬಳ್ಳಿ-ಮಂಗಳೂರು ವಿಶೇಷ ರೈಲು (07311/ 07312) ನ.2ರಂದು ಸಂಜೆ 4ಕ್ಕೆ ಹುಬ್ಬಳ್ಳಿ ನಿಲ್ದಾಣ ದಿಂದ ಹೊರಟು ರಾತ್ರಿ 11:25ಕ್ಕೆ ಯಶವಂತಪುರ ಮತ್ತು ಮರುದಿನ ಪೂ.11:45ಕ್ಕೆ ಮಂಗಳೂರು ತಲುಪಲಿದೆ. ಈ ರೈಲು ನಂ.07312 ಮಂಗಳೂರು-ಹುಬ್ಬಳ್ಳಿ ವಿಶೇಷ ರೈಲು ನ.3ರಂದು ಮಧ್ಯಾಹ್ನ 1ಕ್ಕೆ ಹುಬ್ಬಳ್ಳಿ ತಲುಪಲಿದೆ.

ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್‌ಗಳಲ್ಲಿ ಟಿಕೆಟ್ ಲಭಿಸದೆ ಊರಿಗೆ ಬಂದು ಹೋಗುವುದಕ್ಕೆ ಸಮಸ್ಯೆಯಾಗುತ್ತದೆ. ಆದ್ದರಿಂದ ದೀಪಾವಳಿ ಸಂದರ್ಭ ಉಭಯ ನಿಲ್ದಾಣ ಗಳ ನಡುವೆ ವಿಶೇಷ ರೈಲು ಒದಗಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/10/2024 10:07 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ