ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇಂದು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ - ವ್ಯಾಪಕ ಸಿದ್ಧತೆ

ಉಡುಪಿ: ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ನಡೆಯಲಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್ ಅಧಿಕಾರಿಗಳು ಹಾಗೂ ಮತಕಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2480 ಮತದಾರರು ಇದ್ದಾರೆ. ಉಡುಪಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ಕೆಲವರು ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ್ದು, ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದು ಮತ ಬಹಿಷ್ಕಾರ ನಡೆಸದಂತೆ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರನ್ನು ಮನವಿ ಮಾಡಿದ್ದಾರೆ. ಚುನಾವಣಾ ಪ್ರಕ್ರಿಯೆ ನಂತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/10/2024 07:03 am

Cinque Terre

3.24 K

Cinque Terre

0

ಸಂಬಂಧಿತ ಸುದ್ದಿ