ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ - ಬಿರುಸಿನ‌ ಮತದಾನ

ಉಡುಪಿ: ಇಂದು ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ನಡೆಯುತ್ತಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್ ಅಧಿಕಾರಿಗಳು ಹಾಗೂ ಮತಕಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2480 ಮತದಾರರು ಇದ್ದಾರೆ.

ಬೆಳಿಗ್ಗೆ ಎಂಟರಿಂದ ಸಂಜೆ ನಾಲ್ಕರವರೆಗೆ ಮತದಾನ ನಡೆಯಲಿದೆ.ಸ್ಥಳೀಯ ಸಂಸ್ಥೆಗಳ ಸದಸ್ಯರು , ಶಾಸಕರು ,ಸಂಸದರು ಮತದಾರರಾಗಿದ್ದಾರೆ.ಬೆಳಿಗ್ಗಿನಿಂದಲೇ ಜಿಲ್ಲೆಯಾದ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

21/10/2024 10:33 am

Cinque Terre

1.51 K

Cinque Terre

0

ಸಂಬಂಧಿತ ಸುದ್ದಿ