ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಪ್ರಸಕ್ತ ದಿನಗಳಲ್ಲಿ ಪ್ರಕೃತಿಯೊಂದಿಗೆ ಮಾನವನ ಸಂಬಂಧ ಕ್ಷೀಣಿಸುತ್ತಿ ರುವುದು ಆತಂಕಕಾರಿ- ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

ಕೊಡಗು: ಅಖಿಲ ಭಾರತ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ೧೪ನೇ ವರ್ಷದ ತಲಕಾವೇರಿ-ಪೂಂಪ್ ಹಾರ್ ನದಿ ಜಾಗೃತಿ ಯಾತ್ರೆಗೆ ಕಾವೇರಿಯ ತವರು ಕೊಡಗಿನ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.

ದಕ್ಷಿಣ ಭಾರತದ ತಮಿಳುನಾಡು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಸಾಧು-ಸಂತರ ತಂಡದ ಸದಸ್ಯರು ಕ್ಷೇತ್ರದಲ್ಲಿ ಕಾವೇರಿ ಕುಂಡಿಕೆ ಬಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಕಾವೇರಿ ಮಾತೆಯ ರಥಕ್ಕೆ ಪೂಜೆ ಸಲ್ಲಿಸಿ, ಅರ್ಚನೆ ಅಷ್ಟೋತ್ತರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಂತರ ಭಾಗಮಂಡಲ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.

ಸಂಗಮದಲ್ಲಿ ಯಾತ್ರಾ ತಂಡ ಪೂಜೆ ಸಲ್ಲಿಸಿ ಕಾವೇರಿ ಮಾತೆಗೆ ಅಭಿಷೇಕ ನೆರವೇರಿಸಿದರು. ನಂತರ ನದಿಗೆ ಮಹಾ ಆರತಿ ಬೆಳಗಿದರು. ಪ್ರಸಕ್ತ ದಿನಗಳಲ್ಲಿ ಪ್ರಕೃತಿಯೊಂದಿಗೆ ಮಾನವನ ಸಂಬಂಧ ಕ್ಷೀಣಿಸುತ್ತಿ ರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ವೀರಾಜಪೇಟೆ ಅರಮೇರಿ ಕಳಂಚೇರಿ ಮಠಾಧೀಶ ರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Edited By : Somashekar
PublicNext

PublicNext

21/10/2024 12:11 pm

Cinque Terre

40.59 K

Cinque Terre

0

ಸಂಬಂಧಿತ ಸುದ್ದಿ