ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ- ಕಾಂಗ್ರೆಸ್ ಮುಖಂಡನಿಂದ ಮಲ್ಪೆ ಠಾಣೆಯಲ್ಲಿ ದೂರು ದಾಖಲು

ಮಲ್ಪೆ: ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವಸಗಿರುವ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಲ್ಪೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೂಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

21/10/2024 12:50 pm

Cinque Terre

2.53 K

Cinque Terre

0

ಸಂಬಂಧಿತ ಸುದ್ದಿ