ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಜನತಾ ದರ್ಶನ ಆರಂಭ

ಧಾರವಾಡ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮನೆಗೆ ಅಲೆದಾಡಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲೆಗಳಲ್ಲೇ ಜನತಾ ದರ್ಶನ ಕಾರ್ಯಕ್ರಮ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದೆ.

ಸೋಮವಾರ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಯಿತು.

ಧಾರವಾಡ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದು ಬಗೆಹರಿಸಿಕೊಳ್ಳುವ ಕೆಲಸ ಮಾಡಿದರು. ಮೂಲಭೂತ ಸೌಕರ್ಯ, ಸಾರ್ವಜನಿಕ ಜಾಗ ಒತ್ತುವರಿ, ವೈಯಕ್ತಿಕ ಸಮಸ್ಯೆಗಳನ್ನು ಜನ ಸಚಿವರ ಗಮನಕ್ಕೆ ತಂದರು.

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಡಿಸಿಪಿ ಮಹಾಲಿಂಗ ನಂದಗಾವಿ, ಜಿಲ್ಲಾ ಪಂಚಾಯಿತಿ ಸಿಇಓ ಸ್ವರೂಪಾ ಟಿ.ಕೆ. ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

Edited By : Suman K
Kshetra Samachara

Kshetra Samachara

21/10/2024 01:33 pm

Cinque Terre

41.1 K

Cinque Terre

6

ಸಂಬಂಧಿತ ಸುದ್ದಿ