ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಮಳೆಗೆ ಬಿದ್ದ ಮನೆ, ಮಣ್ಣಿನಡಿ ಸಿಲುಕಿದ ಅತ್ತೆ-ಸೊಸೆ, ಚಿಕಿತ್ಸೆ ಫಲಕಾರಿಯಾಗದೇ ಅತ್ತೆ ಸಾವು

ನವಲಗುಂದ: ನಿರಂತರವಾಗಿ ಸುರಿದ ಮಳೆಯಿಂದ ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಿಸದೇ ಕಿಮ್ಸ್ನಲ್ಲಿ ನಿನ್ನೆ ರಾತ್ರಿ ಸಾವಿಗೀಡಾಗಿದ್ದಾರೆ.

ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ತಕ್ಷಣವೇ ಗ್ರಾಮಸ್ಥರು ಮಣ್ಣಿನಡಿ ಸಿಲುಕಿದ್ದ ಅತ್ತೆ-ಸೊಸೆಯನ್ನ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ, ಅತ್ತೆ ಮಂಗಳಾ ಪಾಟೀಲ ಅವರಿಗೆ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇನ್ನೂ ಸೊಸೆ ಸುವರ್ಣ ಪಾಟೀಲ ಅವರಿಗೆ ತಲೆಗೆ ಪೆಟ್ಟಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಳೆಗೆ ನೆಲಕ್ಕುರುಳಿದ ಮನೆ ಒಂದು ಜೀವವನ್ನು ಪಡೆದಿದ್ದು ವಿಷಾದನೀಯ ಸಂಗತಿ.

- ಶಂಕರ ಸುಭೇದಾರಮಠ, ಪಬ್ಲಿಕ್ ನೆಕ್ಸ್ಟ್ ನವಲಗುಂದ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/10/2024 02:55 pm

Cinque Terre

65.83 K

Cinque Terre

3

ಸಂಬಂಧಿತ ಸುದ್ದಿ